ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲೇರಿದ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಫೈಟ್

ಬೆಳಗಾವಿ: ಬೆಳಗಾವಿಯ ಅನಗೋಳದ ಛತ್ರಪತಿ ಸಂಭಾಜಿ ಮಹಾರಾಜರ ಮೂರ್ತಿ ಅನಾವರಣದ ಗೊಂದಲ ಈಗ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೆಟ್ಟಿಲೇರಿದ್ದು, ಶಾಸಕ ಅಭಯ ಪಾಟೀಲ ಮತ್ತು ಗ್ರಾಮಸ್ಥರ ಅಭಿಪ್ರಾಯಗಳನ್ನು ಪಡೆದು ಅಧ್ಯಯನ ನಡೆಸಿ ನಿರ್ಣಯ ಕೈಗೊಳ್ಳಲು ಡಿ.ಸಿ.ಯವರು ಸಮಯಾವಕಾಶವನ್ನು ಕೇಳಿದ್ದಾರೆ.

ನಾಳೆ ಬೆಳಗಾವಿಯ ಅನಗೋಳದ ವೃತ್ತದಲ್ಲಿರುವ ಛತ್ರಪತಿ ಸಂಭಾಜಿ ಮಹಾರಾಜರ ಮೂರ್ತಿಯ ಅನಾವರಣಕ್ಕೆ ಮುಹೂರ್ತ ಫಿಕ್ಸ್ ಆಗಿತ್ತು. ಆದರೆ, ಏಕಾಏಕಿ ಮೂರ್ತಿ ಅನಾವರಣ ಕಾರ್ಯಕ್ರಮ ರದ್ದು ಮಾಡಲಾಗಿತ್ತು.‌ ಆದರೆ, ಶಾಸಕ ಅಭಯ ಪಾಟೀಲ ಈ ಕಾರ್ಯಕ್ರಮಕ್ಕೆ ಯಾರ ವಿರೋಧವೂ ಇಲ್ಲ. ಹಲವಾರು ಜನರು ಬೆಂಬಲ ಸೂಚಿಸಿದ್ದಾರೆ. ಅಲ್ಲಿಯ ಕಾಮಗಾರಿ ಪೂರ್ಣಗೊಂಡಿದ್ದು, ನಾಳೆ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದಿದ್ದಾರೆ.

ಈ ನಡುವೆ ಇಂದು ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರೊಂದಿಗೆ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿಗಳು ಎರಡೂ ಕಡೆಯವರ ಅಭಿಪ್ರಾಯಗಳನ್ನು ಪಡೆದು, ಯಾರಿಗೂ ತೊಂದರೆಯಾಗದಂತೆ ಶಾಂತಿ- ಸೌಹಾರ್ದಯುತವಾಗಿ ಕಾರ್ಯಕ್ರಮ ನಡೆಸಲು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು. ಈ ಕುರಿತು ಚರ್ಚಿಸಲು ಅವಕಾಶ ನೀಡಬೇಕೆಂದು ಸಮಯಾವಕಾಶವನ್ನು ಕೇಳಿದ್ದಾರೆ.

Edited By : Manjunath H D
PublicNext

PublicNext

04/01/2025 08:32 pm

Cinque Terre

31.04 K

Cinque Terre

0

ಸಂಬಂಧಿತ ಸುದ್ದಿ