ಹಾವೇರಿ : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಹಾವೇರಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ಆಸ್ಪತ್ರೆಯಲ್ಲಿ ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಮಹಿಳೆಯರು ಆರೋಪಿಸಿದರು. ಸರಣಿ ಸಾವು ಸಂಭವಿಸಿದರು ಸರ್ಕಾರ ಎಚ್ಚೆತ್ರುಗೊಂಡಿಲ್ಲ ಎಂದು ಕಾರ್ಯಕರ್ತರು ಆರೋಪಿಸಿದರು.
ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವ ಎಚ್ಚರಿಕೆಯನ್ನ ಮಹಿಳಾ ಕಾರ್ಯಕರ್ತೆಯರು ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಶೋಭಾ ನಿಸ್ಸೀಮಗೌಡ್ರ ಸೇರಿದಂತೆ ಮಹಿಳಾ ಮುಖಂಡರು ಪಾಲ್ಗೊಂಡಿದ್ದರು.
Kshetra Samachara
04/01/2025 08:44 pm