ಬೆಂಗಳೂರು: ಹೊಸ ವರ್ಷದ ಆರಂಭದಲ್ಲಿ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಮೇಜರ್ ಸರ್ಜರಿಯಾಗುವ ಲಕ್ಷಣಗಳು ಕಾಣುತ್ತಿವೆ. ಸಂಪುಟ ಪುನಾರಚನೆ ಬಗ್ಗೆ ಸಚಿವ ಹೆಚ್.ಕೆ. ಪಾಟೀಲ್ ಸುಳಿವು ನೀಡಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆ ಬಗ್ಗೆ ಸಿಎಂ ಕೂಡ ಮಾತನಾಡಿದ್ದಾರೆ. ಈ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ. ಎಲ್ಲೋ ಚರ್ಚೆ ನಡೆದಿರೋದನ್ನು ಸಿಎಂ ಸೂಕ್ಷ್ಮವಾಗಿ ಹೇಳಿದ್ದಾರೆ ಅಂತ ನೀವು ಭಾವಿಸಿದ್ದೀರಾ? ನಾನು ಕೂಡ ಹಾಗೇ ಭಾವಿಸಿದ್ದೇನೆ.
ಈಗ ಸಂಪುಟ ಪುನಾರಚನೆ ಆಗೋದಕ್ಕೆ ಸೂಕ್ತ ಕಾಲ ಅಂತ ಹೇಳಿರಬೇಕು. ಹೀಗಾಗಿ ಶೀಘ್ರವೇ ಈ ಬಗ್ಗೆ ನಿರ್ಧಾರ ಆಗಬಹುದು ಎಂದು ಹೇಳುವ ಮೂಲಕ ಸಂಪುಟ ಪುನಾರಚನೆಯಾಗುವ ಸುಳಿವನ್ನು ಸಚಿವ ಹೆಚ್.ಕೆ. ಪಾಟೀಲ್ ಬಿಟ್ಟುಕೊಟ್ಟಿದ್ದಾರೆ. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ನಮ್ಮ ಜೊತೆ ಏನೂ ಚರ್ಚೆ ಮಾಡಿಲ್ಲ, ಆ ಚರ್ಚೆಯೇ ನಡೆದಿಲ್ಲ ಎಂದು ತಿಳಿಸಿದರು.
PublicNext
04/01/2025 09:13 pm