ಸಿಡ್ನಿ : ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಐದು ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 6 ವಿಕೆಟ್‌ಗಳಿಂದ ರೋಚಕ ಜಯ ಸಾಧಿಸಿದೆ. ಮೂರೇ ದಿನಕ್ಕೆ ಅಂತ್ಯಗೊಂಡ ಪಂದ್ಯದಲ್ಲಿ ಮೇಲುಗೈ ಸಾಧಿಸುವ ಮೂಲಕ, ಆಸ್ಟ್ರೇಲಿಯಾ ದಶಕದ ಬಳಿಕ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆದ್ದಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡ 157 ರನ್‌ಗಳಿಗೆ ಆಲೌಟ್ ಆಯ್ತು. ಹೀಗಾಗಿ ಆಸೀಸ್ ತಂಡ 162 ರನ್‌ಗಳ ಗುರಿ ಪಡೆಯಿತು. ದಿನದ ಎರಡನೇ ಸೆಷನ್‌ನಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿದ ಆಸೀಸ್, ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿತು. ಇಷ್ಟೇ ಅಲ್ಲ ಆಸೀಸ್ ತಂಡವೀಗ ಅಧಿಕೃತವಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸಿದೆ.
PublicNext
05/01/2025 09:16 am