ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಆರ್ಥಿಕ ಪ್ರಗತಿಗೆ ಶಿಕ್ಷಣ ಸಹಕಾರಿ - ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಕಳೆದ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ನನಗೆ ವೈಯಕ್ತಿಕವಾಗಿ ತೃಪ್ತಿ ತಂದಿಲ್ಲ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಕೌಟುಂಬಿಕ ವ್ಯವಸ್ಥೆಯನ್ನು ದೂರದೆ ಸ್ವ ಪರಿಶ್ರಮದಿಂದ ಅಭ್ಯಾಸ ನಡೆಸಿ ಕಾಲೇಜು ಹಾಗು ತಾಲೂಕಿಗೆ ಉತ್ತಮ ಫಲಿತಾಂಶ ತರುವಂತಾಗಬೇಕು ಎಂದು ಶಾಸಕ ಟಿ ರಘುಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ, ಸಾಂಸ್ಕೃತಿಕ, ಎನ್ಎಸ್ಎಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಮಾರೋಪ ಸಮಾರಂಭ 2024-25ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಘಟ್ಟಗಳು ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮಹತ್ವದ ಘಟ್ಟವಾಗಿದೆ.

ಇನ್ನು ಕೇವಲ ಎರಡು ತಿಂಗಳಗಳಲ್ಲಿ ಮುಖ್ಯ ಪರೀಕ್ಷೆ ಎದುರಿಸಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳಿಂದ ಹೊರಬಂದು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಉತ್ತಮ ಫಲಿತಾಂಶ ಪಡೆದರೆ ಮುಂದೆ ತಮ್ಮ ಜೀವನ ರೂಪಿಸಿಕೊಳ್ಳಲು ಅಡಿಪಾಯ ಹಾಕಿದಂತಾಗುತ್ತದೆ ಹೆಚ್ಚು ಅಂಕಗಳಿಸುವುದರಿಂದ ತಮ್ಮ ಪೋಷಕರಿಗೆ ಕಾಲೇಜಿಗೆ ಹಾಗೂ ತಾಲೂಕಿಗೆ ಉತ್ತಮ ಹೆಸರು ತರಲು ಸಾಧ್ಯವಾಗುತ್ತದೆ.

ಶಿಕ್ಷಣ ಪಡೆಯುವುದರಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಹಾಗೂ ಸಾಮಾಜಿಕವಾಗಿ ಆರ್ಥಿಕವಾಗಿ ಪ್ರಗತಿ ಹೊಂದಲು ಶಿಕ್ಷಣ ಅತ್ಯಂತ ಸಹಕಾರಿಯಾಗಲಿದ್ದು ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತಂದು ಉತ್ತಮ ತರಬೇತಿ ಮೂಲಕ ಪೋಷಣೆ ಮಾಡಿದರೆ ರಾಜ್ಯದಲ್ಲಿ ತಾಲೂಕಿನ ಕೀರ್ತಿ ಪತಾಕೆ ಹಾರಿಸಲು ಸಹಕಾರಿಯಾಗಲಿದೆ ಕಾಲೇಜಿಗೆ ಕುಡಿಯುವ ನೀರಿನ ವ್ಯವಸ್ಥೆ ಸಭಾಂಗಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು.

Edited By : PublicNext Desk
Kshetra Samachara

Kshetra Samachara

05/01/2025 10:37 am

Cinque Terre

1.58 K

Cinque Terre

0

ಸಂಬಂಧಿತ ಸುದ್ದಿ