ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಶಿಕಾರಿಪುರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ, ಮನೆಕಳ್ಳತನ ಮಾಡಿದ್ದ ಆರೋಪಿ ಬಂಧನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ಮನೆಯೊಂದರಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನ ಶಿಕಾರಿಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನ ಶಿಕಾರಿಪುರ ತಾಲೂಕಿನ ಚುರ್ಚುಗುಂಡಿ ಗ್ರಾಮದ ಶಿವರಾಜ್ ಅಲಿಯಾಸ್ ಶಿವು ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿ ಬಳಿ 6 ಲಕ್ಷ 30 ಸಾವಿರ ರೂ ಮೌಲ್ಯದ ಚಿನ್ನಾಭರಣ, 6,000 ಮೌಲ್ಯದ 60 ಗ್ರಾಂ ತೂಕದ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಸೇರಿದಂತೆ ಒಟ್ಟು 7 ಲಕ್ಷ 16 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Edited By : Abhishek Kamoji
Kshetra Samachara

Kshetra Samachara

05/01/2025 11:55 am

Cinque Terre

11.76 K

Cinque Terre

0

ಸಂಬಂಧಿತ ಸುದ್ದಿ