ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅರಬಿಳಚಿ ಗ್ರಾಮದ ಜಯಣ್ಣ ಎಂಬುವರ ಮನೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿ ಮನೆಯಲ್ಲಿದ್ದ 17 ಲಕ್ಷ ಮೌಲ್ಯದ 599 ಗ್ರಾಂ ಬಂಗಾರ, 1 ಲಕ್ಷ 50 ಸಾವಿರ ಮೌಲ್ಯದ 3 ಕೆಜಿ 80 ಗ್ರಾಂ ಬೆಳ್ಳಿ, 1 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾಗಿದ್ರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಹೊಳೆಹೊನ್ನೂರು ಪೊಲೀಸರು ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭದ್ರಾವತಿ ತಾಲೂಕಿನ ತಿಮ್ಮಾಪುರ ಗ್ರಾಮದ ದರ್ಶನ್, ಧನಂಜಯ, ರವಿ ಬಂಧಿತ ಆರೋಪಿಗಳು. ಇನ್ನು ಬಂಧಿತ ಆರೋಪಿಗಳಿಂದ 26 ಲಕ್ಷ 50 ಸಾವಿರ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗರದನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Kshetra Samachara
05/01/2025 12:16 pm