ಮಂಗಳೂರು: ರಸ್ತೆಬದಿ ನಿಲ್ಲಿಸಿದ್ದ ಟೂರಿಸ್ಟ್ ಕಾರೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿ ಹೊತ್ತಿ ಉರಿದ ಘಟನೆ ನಗರದ ಲೇಡಿಹಿಲ್‌ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ನಡೆದಿದೆ.
ಶನಿವಾರ ರಾತ್ರಿ ಟೂರಿಸ್ಟ್ ಕಾರನ್ನು ರಸ್ತೆಬದಿ ನಿಲ್ಲಿಸಿ ಚಾಲಕ ಅಂಗಡಿಗೆ ತೆರಳಿದ್ದರು. ಈ ವೇಳೆ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಬೆಂಕಿ ಇಡೀ ಕಾರನ್ನು ವ್ಯಾಪಿಸಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಅಷ್ಟರಲ್ಲಾಗಲೇ ಕಾರು ಭಾಗಶಃ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
Kshetra Samachara
05/01/2025 12:45 pm