ಸಾಗರ: ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ಫಾರೆಸ್ಟ್ ಗಾರ್ಡ್ ನ್ನು ಸಸ್ಪೆಂಡ್ ಮಾಡಲು ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94ರ ಅರಣ್ಯ ಪ್ರದೇಶದಲ್ಲಿ ಮರಗಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ನಿನ್ನೆ ಪಬ್ಲಿಕ್ ನೆಕ್ಸ್ಟ್ ಸುದ್ದಿ ಪ್ರಸಾರ ಮಾಡಿತ್ತು.
ಈ ವಿಚಾರವಾಗಿ ಸಾಗರದ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಪಬ್ಲಿಕ್ ನೆಕ್ಸ್ಟ್ ನೊಂದಿಗೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು,ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಯಾರು ಸಿದ್ದಾಪುರದಿಂದ ಇಲ್ಲಿ ಬಂದು ಈ ರೀತಿಯ ಕೃತ್ಯ ಮಾಡಿದ್ದಾರೆ ಎಂದು ಮರೆತಿಲ್ಲಭವಾಗಿದೆ ಯಾರೇ ಮಾಡಿದರು ಅವರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಅದೇ ರೀತಿ ಫಾರೆಸ್ಟ್ ಗಾರ್ಡ್ ನ್ನು ಸಸ್ಪೆಂಡ್ ಮಾಡಲು ಅಧಿಕಾರಿಗಳಿಗೆ ಅಮಾನತುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
Kshetra Samachara
05/01/2025 01:24 pm