ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಾರ್ನಾಡ್ ಜಂಕ್ಷನ್ ಬಳಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದು ಅಪಾಯಕಾರಿಯಾಗಿ ಬೀಳುವ ಸ್ಥಿತಿಯಲ್ಲಿತ್ತು. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸಿ ಅಪಾಯ ಸಂಭವಿಸುವ ಮೊದಲೇ ಬೀಳುವ ಸ್ಥಿತಿಯಲ್ಲಿರುವ ವಿದ್ಯುತ್ ಕಂಬ ತೆರವುಗೊಳಿಸಿ ಜೀವ ಉಳಿಸಿ ಎಂದು ಮುಲ್ಕಿ ಮೆಸ್ಕಾಂ ಅಧಿಕಾರಿಗಳ ಗಮನ ಸೆಳೆದಿತ್ತು.
ಈ ಬಗ್ಗೆ ಕೂಡಲೇ ಕಾರ್ಯಪ್ರವೃತ್ತರಾದ ಮುಲ್ಕಿ ಮೆಸ್ಕಾಂ ಹಿರಿಯ ಅಧಿಕಾರಿಗಳು ಗುತ್ತಿಗೆದಾರರ ಮೂಲಕ ಅಪಾಯಕಾರಿ ಬೀಳುವ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬವನ್ನು ಬದಲಾಯಿಸಿ ನೂತನ ವಿದ್ಯುತ್ ಕಂಬ ಅಳವಡಿಸಿದ್ದಾರೆ.
ವಿದ್ಯುತ್ ಕಂಬದ ಮೇಲ್ಭಾಗದಲ್ಲಿ ಅಪಾಯಕಾರಿ ಮರವಿದ್ದು ತೆರೆವುಗೊಳಿಸಲು ಮುಲ್ಕಿ ನಗರ ಪಂಚಾಯತ್ ಹಾಗೂ ಮೆಸ್ಕಾಂ ಇಲಾಖೆ ಮುಂದಾಗಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
Kshetra Samachara
05/01/2025 02:26 pm