ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೊರಬ : ಮಹಿಳೆಯ ಮಾಂಗಲ್ಯ ಸರ ಎಗರಿಸಿ ಪರಾರಿಯಾದ ಖದೀಮರು

ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಿತ್ತು ಕಳ್ಳರು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ ಎಂಬುವವರು ಮಾಂಗಲ್ಯ ಸರ ಕಳೆದುಕೊಂಡವರು.

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು 25 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾಗಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Edited By : Shivu K
PublicNext

PublicNext

05/01/2025 02:45 pm

Cinque Terre

32.59 K

Cinque Terre

0

ಸಂಬಂಧಿತ ಸುದ್ದಿ