ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಪ್ರೇಯಸಿ ಮನೆಯಿಂದ ಬರುತ್ತಿದ್ದ ವಿವಾಹಿತನನ್ನು ಅಟ್ಟಾಡಿಸಿ ಕೊಂದ ಪತ್ನಿ ಕುಟುಂಬಸ್ಥರು!

ಕೋಲಾರ: ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಹತ್ಯೆಗೈದ ಘಟನೆ ಕೋಲಾರದ ನೂರ್ ನಗರದಲ್ಲಿ ನಡೆದಿದೆ. ಉಸ್ಮಾನ್ ಕೊಲೆಯಾದ ವ್ಯಕ್ತಿ.

ಉಸ್ಮಾನ್ ಕಳೆದ 5 ವರ್ಷಗಳ ಹಿಂದೆ ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬಂಧಿ ಯುವತಿಯೊಂದಿಗೆ ಉಸ್ಮಾನ್‍ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು.

ಆದರೆ, ಉಸ್ಮಾನ್‌ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಭೀಕರ ದಾಳಿ ನಡೆಸಿದ್ದರು. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Manjunath H D
PublicNext

PublicNext

05/01/2025 04:10 pm

Cinque Terre

39.71 K

Cinque Terre

0

ಸಂಬಂಧಿತ ಸುದ್ದಿ