ಸಕಲೇಶಪುರ: ಹಾಡಹಗಲೇ ಕಾಡಾನೆ ಹಿಂಡು ಕಾಣಿಡಿಕೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಣ್ಣಾನೆ ಮತ್ತು ಮರಿಗಳೇ ಹೆಚ್ಚಾಗಿರುವ ಕಾಡಾನೆಗಳ ಹಿಂಡು ಕಾಡಿನಿಂದ ರೈತರ ಜಮೀನಿಗೆ ಲಗ್ಗೆ ಇಟ್ಟಿವೆ.
ಕಾಡಾನೆಗಳು ಬಂದಿರುವ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಮೈಕ್ ಮೂಲಕ ಗ್ರಾಮಸ್ಥರಿಗೆ ಕಾಡಾನೆಗಳ ಬಗ್ಗೆ ಸೂಚನೆ ನೀಡುತ್ತಿದ್ದು, ಕಾಡಾನೆಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ.
ಕಾಡಾನೆಗಳನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ.
PublicNext
05/01/2025 04:32 pm