ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಶಿವಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಶೈಲಜಾ (28) ಮೃತ ದುರ್ದೈವಿಯಾಗಿದ್ದಾಳೆ.
ಶೈಲಜಾಳನ್ನು ಪತಿ ಹಾಗೂ ಅವರ ಅತ್ತೆ ಹೊಡೆದು ನೇಣು ಹಾಕಿದ್ದಾರೆ ಎಂದು ಶೈಲಜಾ ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಘಟನೆ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
PublicNext
05/01/2025 05:01 pm