ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಕಿರು ಷಷ್ಠಿ ಉತ್ಸವ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ, ಮಹಾ ಚಂಡಿಕಾಯಾಗ, ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ನಡೆಯಿತು.
ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ ಮತ್ತು ಸಮಿತಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
Kshetra Samachara
05/01/2025 07:30 pm