ದೊಡ್ಡಬಳ್ಳಾಪುರ : ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಚಾಲನೆ ನೀಡಿದರು.
ಮಧ್ಯಾಹ್ನ ಬ್ರಹ್ಮರಥೋತ್ಸವಕ್ಕೆ ಉಸ್ತುವಾರಿ ಸಚಿವರು ಚಾಲನೆ ನೀಡಿದರು. ಇದೇ ಸಮಯಕ್ಕೆ ಗರುಡ ಪಕ್ಷಿ ದೇವಸ್ಥಾನ ಮತ್ತು ರಥವನ್ನು ಪ್ರದಕ್ಷಿಣೆ ಹಾಕಿ ಅಲ್ಲಿಂದ ತೆರಳಿತು. ಅನಂತರ ಭಕ್ತರು ಬಾಳೆಹಣ್ಣು, ದವನ ರಥಕ್ಕೆ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಶಿವಶಂಕರ, ಜಿ.ಪಂ. ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿಕೆ ಬಾಬಾ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಮುಜರಾಯಿ ಇಲಾಖೆ ತಹಸೀಲ್ದಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.
PublicNext
05/01/2025 09:16 pm