ಕುಶಾಲನಗರ : ರಾಜ್ಯದಲ್ಲಿಯೇ ಪ್ರಥಮ ಹಾಲಿನ ಡೈರಿ ಎಂಬ ಹೆಸರು ಗಳಿಸಿರುವ ಕೂಡಿಗೆ ಹಾಲಿನ ಡೈರಿಯು ಸದ್ಯದಲ್ಲೇ ಮೇಲ್ದರ್ಜೆಗೆ ಏರಲಿದ್ದು, ಮುಂದಿನ ದಿನಗಳಲ್ಲಿ ನಮ್ಮ ಡೈರಿಯಲ್ಲಿ ಮೊಸರು ಹಾಗೂ ಮಜ್ಜಿಗೆ ಉತ್ಪನ್ನ ತಯಾರಿಕೆ ಘಟಕ ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ಹಾಸನ ಹಾಲು ಒಕ್ಕೂಟ ಕೊಡಗು ಘಟಕದ ನಿರ್ದೇಶಕರಾದ ಕೆ.ಕೆ. ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಕೂಡಿಗೆ ಹಾಲಿನ ಡೈರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
1955ರಲ್ಲಿ ರಾಜ್ಯದಲ್ಲಿಯೇ ಪ್ರಥಮ ಹಾಲಿನ ಡೈರಿಯಾಗಿ ಕೂಡಿಗೆ ಡೈರಿ ಸ್ಥಾಪನೆಗೊಂಡಿದೆ. ಇದನ್ನು ಮದರ್ ಡೈರಿ ಎಂದು ಕೂಡ ಕರೆಯಲಾಗುತ್ತದೆ. ಇದೀಗ ಕಚೇರಿಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ರೂ.34 ಲಕ್ಷ ವೆಚ್ಚದಲ್ಲಿ ತಾತ್ಕಾಲಿಕ ಕಚೇರಿ ನಿರ್ವಹಣೆಗೆ ಕಟ್ಟಡ ನಿರ್ಮಿಸಲಾಗುವುದು. ಅಲ್ಲದೆ ಮುಂದಿನ ದಿನಗಳಲ್ಲಿ ರು.20 ಕೋಟಿ ವೆಚ್ಚದಲ್ಲಿ ಕೂಡಿಗೆ ಡೈರಿಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸುಮಾರು 39 ಹಾಲು ಉತ್ಪಾದಕರ ಸಂಘಗಳಿದ್ದು, ಪ್ರತಿ ದಿನ ಕೂಡ ಜಿಲ್ಲೆಯಿಂದ ಸುಮಾರು 30 ಸಾವಿರ ಲೀಟರ್ ಹಾಲನ್ನು ಸಂಗ್ರಹಿಸಲಾಗುತ್ತಿದೆ. ದಿನವೊಂದಕ್ಕೆ ಸುಮಾರು 55 ಸಾವಿರ ಲೀಟರ್ ಹಾಲು ಕೂಡಿಗೆ ಡೈರಿಯಿಂದ ಮಾರಾಟವಾಗುತ್ತದೆ. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅರಕಲುಗೂಡು, ರಾಮನಾಥಪುರದ ವಿವಿಧ ಹಾಲು ಉತ್ಪಾದರಕ ಸಂಘದಿAದ 25 ಸಾವಿರ ಲೀಟರ್ ಹಾಲನ್ನು ಟ್ಯಾಂಕರ್ ಮೂಲಕ ತರಲಾಗುತ್ತಿದ್ದು, ಸಂಸ್ಕರಣೆ ಮಾಡಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
Kshetra Samachara
05/01/2025 10:07 pm