ಸುಳ್ಯ: ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಸಂಪಾಜೆಯ ದೇವರ ಕೊಲ್ಲಿಯಲ್ಲಿ ನಡೆದಿದೆ
ದೇವರಕೊಲ್ಲಿಯ ನಿವಾಸಿ ಮುತ್ತು ಗಾಯಗೊಂಡವರು.
ಇವರು ಎಸ್ಟೇಟ್‌ನಲ್ಲಿ ರಾತ್ರಿ ವಾಚ್‌ಮೆನ್ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ದಿಢೀರ್ ದಾಳಿ ಮಾಡಿದೆ. ಅದೃಷ್ಟವಶಾತ್ ಮುತ್ತು ಸ್ಥಳದಿಂದ ಓಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮುತ್ತು ಅವರ ಪುತ್ರ ಕೂಡಲೇ ಪೊಲೀಸ್ ಮತ್ತು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ದ್ವಿಚಕ್ರ ವಾಹನ ಜಖಂಗೊಂಡಿದೆ.
ಗಾಯಾಳುವನ್ನು ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Kshetra Samachara
05/01/2025 10:51 pm