ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫೇಸ್‌ಬುಕ್‌ನಲ್ಲಿ ಚಿತ್ರದುರ್ಗದ ಮಾದಾರ ಚನ್ನಯ್ಯ ಶ್ರೀಗಳಿಗೆ ಅವಹೇಳನ - ದೂರು

ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶವನ್ನು ಅಪ್‌ಲೋಡ್ ಮಾಡಿದ ಆರೋಪದಡಿ ಯತಿರಾಜ್‌ ಬ್ಯಾಲಹಳ್ಳಿ ಮತ್ತು ಇತರರ ವಿರುದ್ಧ ಇಲ್ಲಿನ ಪಟ್ಟಣ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.ಯತಿರಾಜ್ ಅವರು ಫೇಸ್‌ಬುಕ್‌ನಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಕುರಿತಾಗಿ ಎರಡು ದಿನಗಳಲ್ಲಿ ಎರಡು ಬಾರಿ ಪೋಸ್ಟ್ ಹಾಕಿದ್ದಾರೆ. ಈ ಘಟನೆಯು ನಮ್ಮ ಜನಾಂಗವನ್ನು ಅವಮಾನಿಸುವ ದುಷ್ಕೃತ್ಯವಾಗಿದೆ. ಹೀಗಾಗಿ ಯತಿರಾಜ್ ಬ್ಯಾಲಹಳ್ಳಿ ಮತ್ತಿತರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ಎಚ್. ಅವರು ಭಾನುವಾರ ಸಂಜೆ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದೆ..

Edited By : PublicNext Desk
Kshetra Samachara

Kshetra Samachara

06/01/2025 09:10 am

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ