ಚಳ್ಳಕೆರೆ: ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿ 5300 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರೆ ಈ ವೇಳೆಗೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳುತ್ತಿತ್ತು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ನಗರದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಭದ್ರಾ ಮೇಲ್ದಂಡೆ ಯೋಜನೆ ವಿಳಂಬ ಕುರಿತು ವಿಚಾರ ಸಂಕೀರ್ಣ ಕಾರ್ಯಕ್ರಮದ ಉದ್ಘಾಟನೆಯನ್ನು ನೆರೆವೇರಿಸಿ ಮಾತನಾಡಿ. ಭದ್ರಾ ಮಲ್ದಂಡೆ ಯೋಜನೆ ಬಯಲು ಸೀಮೆ ಜನರ ಬಹುದಿನಗಳ ಕನಸಾಗಿದ್ದು ಈಗಾಗಲೇ ಯೋಜನೆಗೆ 13,280 ಕೋಟಿ ವೆಚ್ಚವಾಗಿದ್ದು ಚಳ್ಳಕೆರೆಯ 51 ಕೆರೆಗಳಿಗೆ ಈ ಯೋಜನೆಯಿಂದ ನೀರು ತುಂಬಿಸಲಾಗುವುದು ರಾಜ್ಯದ ತುಮಕೂರು ಚಿಕ್ಕಮಗಳೂರು ಚಿತ್ರದುರ್ಗ ದಾವಣಗೆರೆ ಜಿಲ್ಲೆಗಳಿಗೆ ವರದಾನವಾಗಲಿದ್ದು ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳಿಗೆ ಈ ಯೋಜನೆ ಲಾಭ ದೊರೆಯುತ್ತದೆ ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿ 5300 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರೆ ಈ ವೇಳೆಗೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳುತ್ತಿತ್ತು ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಸಿದ್ಧವಾಗಿದ್ದು ಬೆಳಗಾವಿ ಅಧಿವೇಶನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 2028ರ ಮಾರ್ಚ್ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದರು.
Kshetra Samachara
06/01/2025 10:05 am