ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ವಿಕ್ರಂಗೌಡ ಹತ್ಯೆ ಬೆನ್ನಲ್ಲೇ ಬಂದೂಕು ಕೆಳಗಿಳಿಸಲು 6 ಮೋಸ್ಟ್ ವಾಂಟೆಡ್ ನಕ್ಸಲರ ನಿರ್ಧಾರ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳಲ್ಲಿ ಸಕ್ರಿಯರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ರಾಜ್ಯ ಸರ್ಕಾರ ಆರಂಭಿಸಿದೆ. ನಕ್ಸಲರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿರುವ ಹಿನ್ನಲೆ ನಕ್ಸಲ್ ನಾಯಕಿ ಮುಂಡಗಾರು ಲತಾ ನೇತೃತ್ವದಲ್ಲಿ ಆರು ಮಂದಿ ನಕ್ಸಲರು ಮುಖ್ಯವಾಹಿನಿಗೆ ಬರಲು ಸಿದ್ದರಿದ್ದಾರೆ ಎನ್ನಲಾಗಿದೆ.

ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ ಬಳಿಕ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಬೇಕೆಂಬ ಪ್ರಗತಿಪರ ಚಿಂತಕರ ಮನವಿಗೆ ಸ್ಪಂದಿಸಿರುವ ಸರ್ಕಾರ ಶರಣಾಗತಿಗೆ ಮುಕ್ತ ಆಹ್ವಾನ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುಂಡಗಾರು ಲತಾ, ಸುಂದರಿ ಕುಲ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ಕೆ.ವಸಂತ, ಟಿ.ಎನ್.ಜೀಶ್ ಶರಣಾಗತರಾಗಲು ಸಿದ್ಧರಾಗಿದ್ದಾರೆ. ಈ ಪೈಕಿ ಕರ್ನಾಟಕದ ನಾಲ್ವರು, ಕೇರಳದ ಓರ್ವ, ತಮಿಳುನಾಡಿನ ಓರ್ವ ನಕ್ಸಲರಿದ್ದಾರೆ.

ಮುಖ್ಯವಾಹಿನಿಗೆ ಬರಲು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿರುವ ನಕ್ಸಲರು ಅವುಗಳಲ್ಲಿ ಕಸ್ತೂರಿ ರಂಗನ್ ವರದಿ ರದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸಮಸ್ಯೆ, ರೈತರ ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಬೇಕು. ಭೂ ರಹಿತ ಕುಟುಂಬಕ್ಕೆ ಭೂಮಿ ನೀಡಬೇಕು ಎಂಬ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಒಂದು ವೇಳೆ ನಕ್ಸಲರು ಶರಣಾದರೆ ಅವರಿಗೆ 3 ಲಕ್ಷದಿಂದ 7.50 ಲಕ್ಷದವರೆಗೂ ಸರ್ಕಾರ ಪರಿಹಾರ ನೀಡಲಿದೆ ಎಂದು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಅಮಟೆ ಈಗಾಗಲೇ ಮಾಹಿತಿ ನೀಡಿದ್ದಾರೆ.

Edited By : Shivu K
PublicNext

PublicNext

06/01/2025 10:09 am

Cinque Terre

34.28 K

Cinque Terre

0