ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಯಿ ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಗ

ಚಳ್ಳಕೆರೆ ಚಿಕ್ಕಹಳ್ಳಿ ಗ್ರಾಮದ 21 ವರ್ಷದ ರಮೇಶ ಎನ್ನುವ ಯವಕ ಹೆತ್ತ ತಾಯಿ ಕೊಂದು ಬಳಿಕ ತಾನೂ ಕೂಡ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ.ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.ಚಿತ್ರದುರ್ಗ ಮೂಲದ ಚಳ್ಳಕೆರೆಯ ಚಿಕ್ಕಹಳ್ಳಿ ಕುಟುಂಬ, ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬಂದಿದ್ದರು. ಆದ್ರೆ, ಮಗ ಕುಡಿದುಬಂದು ತಾಯಿ ಜೊತೆ ಜಗಳ ಮಾಡುತ್ತಿದ್ದ. ಅದರಂತೆ ನಿನ್ನೆ(ಜನವರಿ 04) ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮೊಬೈಲ್​ ಚಾರ್ಜರ್​ ವೈರ್​ನಿಂದ ತಾಯಿ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.

Edited By : PublicNext Desk
Kshetra Samachara

Kshetra Samachara

06/01/2025 10:23 am

Cinque Terre

1.66 K

Cinque Terre

0

ಸಂಬಂಧಿತ ಸುದ್ದಿ