ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಮಾರಕಾಸ್ತ್ರಗಳಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ

ಸಕಲೇಶಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಇಬ್ಬಡಿ ಕೊಣ್ಣೂರು ಗ್ರಾಮದ ಬಳಿ ನಡೆದಿದೆ.

ಅನಿತಾ (35) ಕೊಲೆಯಾದ ಮಹಿಳೆ.

ಟಿಫನ್ ಬಾಕ್ಸ್‌ನಲ್ಲಿ ಊಟ ತುಂಬಿಕೊಂಡು ಗದ್ದೆ ಕೆಲಸಕ್ಕೆ ಅನಿತಾ ತೆರಳಿದ್ದರು. ರಾತ್ರಿ ಪತ್ನಿ ಕಾಣಲಿಲ್ಲ ಎಂದು ಪತಿ ಚಂದ್ರಶೇಖರ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅನಿತಾಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ಹೊಳೆ ಸಾಲಿನಲ್ಲಿ ಅನಿತಾ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಸಕಲೇಶಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Edited By : Nagaraj Tulugeri
Kshetra Samachara

Kshetra Samachara

06/01/2025 10:38 am

Cinque Terre

1.02 K

Cinque Terre

0