ಧಾರವಾಡ: ಟಿಪ್ಪರ್ ಹಾಗೂ ಕ್ರೂಸರ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕ್ರೂಸರ್‌ನಲ್ಲಿದ್ದ 8 ಜನರಿಗೆ ಗಾಯವಾಗಿರುವ ಘಟನೆ ಧಾರವಾಡ ಬೈಪಾಸ್‌ನ ನರೇಂದ್ರ ಕ್ರಾಸ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ.
ಕ್ರೂಸರ ವಾಹನವು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೊರಟಿತ್ತು. ಈ ವೇಳೆ ಎದುರಿಗೆ ಬರುತ್ತಿದ್ದ ಟಿಪ್ಪರ್ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯಿಂದಾಗಿ ಕ್ರೂಸರ್‌ನ ಮುಂಭಾಗ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/01/2025 10:54 am