ಬೆಂಗಳೂರು: ಸಿಲಿಕಾನ್ ಸಿಟಿ ಜನರೇ ಇಲ್ಲಿ ಕೇಳಿ.. ಮುಂದಿನ ಮೂರು ದಿನಗಳು ಆದಷ್ಟು ಬೆಚ್ಚನೆಯ ಉಡುಪು ಧರಿಸಿ. ಇಲ್ಲದಿದ್ದರೆ ಚಳಿಗೆ ನೀವು ತತ್ತರಿಸಿ ಹೋಗೋದು ಖಂಡಿತ. ರಾಜ್ಯದಲ್ಲಿ ಚಳಿಯ ಅಬ್ಬರ ಶುರುವಾಗಲಿದೆ. ಮುಂದಿನ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಿಗೆ ಶೀತ ಗಾಳಿ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆ ಸಿಲಿಕಾನ್ ಸಿಟಿಗೂ ಶೀತ ಗಾಳಿ ಎಚ್ಚರಿಕೆಯನ್ನು ನೀಡಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡು ಸೇರಿದಂತೆ ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲ್ಬುರ್ಗಿ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಶೀತಗಳಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.
ದಕ್ಷಿಣ ಒಳನಾಡು, ಚಿಕ್ಕಮಗಳೂರು, ಹಾಸನ, ಮಂಡ್ಯ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗೂ ಕೂಡ ಶೀತ ಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.
PublicNext
06/01/2025 10:59 am