ಚಿಕ್ಕೋಡಿ: ಆಕಸ್ಮಿಕವಾಗಿ ಹಳೆಯ ಮರವೊಂದು ರಸ್ತೆಗೆ ಉರುಳಿದ ಘಟನೆ ಚಿಕ್ಕೋಡಿ ಪಟ್ಟಣದ ಆರ್.ಡಿ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ 8 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ .ಹಳೆಯ ಮರು ಒಂದು ಆಕಸ್ಮಿಕವಾಗಿ ರಸ್ತೆಯ ಮೇಲೆ ಉರಳಿ ಬಿದ್ದಿದೆ. ಇದರಿಂದಾಗಿ ನಿಪ್ಪಾಣಿ - ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಸಂಭವಿಸಿತು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ. ಬಳಿಕ ರಸ್ತೆ ಮೇಲೆ ಬಿದ್ದಂತಹ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
PublicNext
06/01/2025 12:18 pm