ಹೊಸದುರ್ಗ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರುವರ್ಸ್ ಮತ್ತು ರೆಂಜರ್ಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮವನ್ನು ಶಾಸಕ ಬಿ.ಜಿ. ಗೋವಿಂದಪ್ಪ ಉದ್ಘಾಟನೆ ಮಾಡಿದರು.
ಬಳಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬೇಕಿರುವ ಅಗತ್ಯ ಮೂಲ ಸೌಕರ್ಯಗಳನ್ನ ಒದಗಿಸುವುದರೊಂದಿಗೆ ಕಾಲೇಜನ್ನ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದೆಂದು ತಿಳಿಸಿದರು.
ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸತತ ಪರಿಶ್ರಮ ಛಲದ ಮನೋಭಾವ ದೊಂದಿಗೆ ಅಧ್ಯಯನ ಮಾಡಿದ್ದಲ್ಲಿ ಖಂಡಿತ ಸಾಧನೆ ಸಾಧ್ಯವಾಗುತ್ತದೆ.
Kshetra Samachara
06/01/2025 01:05 pm