ಧಾರವಾಡ: ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಗುತ್ತಿಗೆದಾರ ಸಚಿನ್ ಅವರು ಆತ್ಮಹತ್ಯೆ ಮಾಡಿಕೊಂಡ ವಿಷಯ ರಾಜ್ಯಾದ್ಯಂತ ಸುದ್ದಿಯಾಗಿದೆ. ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರ ಕೂಡಲೇ ನ್ಯಾಯ ದೊರಕಿಸಬೇಕು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಚಿನ್ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪತ್ತೆ ಮಾಡಬೇಕು. ಸಚಿನ್ ಕುಟುಂಬಕ್ಕೆ ನ್ಯಾಯ ದೊರಕಿಸಿ, ಆ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಅಲ್ಲದೇ ಅವರ ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/01/2025 01:45 pm