ಶಿರಹಟ್ಟಿ : ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಬಸ್ ಗಾಗಿ ಪ್ರತಿಭಟನೆ ನಡೆಸಿದರು. ಈಗಾಗಲೇ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಕಳೆದ ಒಂದು ತಿಂಗಳ ಹಿಂದೆ ಅಧಿಕಾರಿಗಳು ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಬಸ್ ಗಳನ್ನು ಬಿಡುತ್ತೇವೆ ಎಂದು ಹೇಳಿದ್ದರು. ಆದರೆ ಈಗಲೂ ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಎಂದು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆಗೆ ಮುಂದಾದರು.
ಹೌದು ... ಪಟ್ಟಣದ ಬಸ್ ನಿಲ್ದಾಣಕ್ಕೆ ವಿದ್ಯಾರ್ಥಿಗಳು ದಿಗ್ಬಂಧನ ಹಾಕಿ ಯಾವುದೇ ಬಸ್ ಒಳಗೆ ಮತ್ತು ಹೊರಗೆ ಹೋಗದಂತೆ ತಡೆದರು.
ನಮ್ಮ ಸಮಸ್ಯೆಗೆ ಸ್ಪಂದಿಸುವ ತನಕ ಹೋರಾಟ ನಿಲ್ಲುವುದಿಲ್ಲ ಎಂದು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆಗೆ ಮುಂದಾದರು. ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
Kshetra Samachara
06/01/2025 02:04 pm