ಉಡುಪಿ: ಇನ್‌ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು 12.46 ಲಕ್ಷ
ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ.
ಶಿವಳ್ಳಿ ಗ್ರಾಮದ ಸಪ್ನಾ (28) ವಂಚನೆಗೆ ಒಳಗಾದವರು. ಅವರ ಇನ್‌ಸ್ಟಾಗ್ರಾಂ ಖಾತೆಗೆ ವರ್ಕ್ ಫ್ರಮ್ ಹೋಮ್ ಎಂದು ಲಿಂಕ್ ಬಂದಿದ್ದು, ಅದನ್ನವರು ಓಪನ್ ಮಾಡಿದ್ದಾರೆ. ಅದರಲ್ಲಿ ಆರಂಭದಲ್ಲಿ 200 ರೂ. ಹೂಡಿಕೆ ಮಾಡಲು ಹೇಳಿದ್ದರು. ಅದಕ್ಕೆ 50 ರೂ. ಕಮಿಷನ್ ದೊರಕಿದೆ. ಇದನ್ನು ನಂಬಿದ ಯುವತಿ ಹೆಚ್ಚಿನ ಕಮಿಷನ್ ಬರುವುದಾಗಿ ನಂಬಿ ಡಿಸೆಂಬರ್ 9ರಿಂದ ಡಿಸೆಂಬರ್ 28ರ ನಡುವಿನ ಅವಧಿಯಲ್ಲಿ ಅಪರಿಚಿತರು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಫೋನ್ ಪೇ, ಪೇಟಿಎಂ ಹಾಗೂ ಕ್ಯಾಶ್ ಡೆವಾಸಿಟ್ ಮೂಲಕ ಒಟ್ಟು 12.46 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದು, ಹಣ ವಾಪಸ್ ಸಿಗದೆ ಮೋಸ ಹೋಗಿದ್ದಾರೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
06/01/2025 02:12 pm