ಹೊಸದುರ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುವ ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಸಂದರ್ಭದಲ್ಲಿ ಕೊಡಲ್ಪಡುವ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಈ ವರ್ಷ ಸಾಣೆಹಳ್ಳಿಯ ಶ್ರೀ ತರಳಬಾಳು ಜಗದ್ಗುರು ಶಾಖ ಮಠದ ಪಟ್ಟಾಧ್ಯಕ್ಷರಾದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಆಯ್ಕೆಯಾಗಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಈ ಪ್ರಶಸ್ತಿಯನ್ನು ಪ್ರಕಟಿಸಿದ್ದಾರೆ.ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ತಮ್ಮ ಪರಿಶ್ರಮ, ಜನಪರ ಕಾಳಜಿ, ವೈಚಾರಿಕತೆ, ರಂಗಸತಿ ಹಾಗೂ ಸಾಹಿತ್ಯ ಕೃಷಿ ಮತ್ತು ಸಾಂಸ್ಕೃತಿಕ ಒಲವುಗಳ ಮೂಲಕ ಜನಮಾನಸದಲ್ಲಿ ಮನೆ ಮಾಡಿದ್ದಾರೆ ಹಾಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ತಿಳಿಸಿದ್ದಾರೆ.
Kshetra Samachara
06/01/2025 02:37 pm