ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಪರೂಪದ ಜನನ - ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ

ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತೆಲಂಗಾಣದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳು. ಈ ನಾಲ್ಕು ಶಿಶುಗಳೂ ಆರೋಗ್ಯವಾಗಿವೆ. ಈ ಮಕ್ಕಳು ಕ್ರಮವಾಗಿ 1.1 ಕೆಜಿ, 1.2 ಕೆಜಿ, 800 ಗ್ರಾಂ, 900 ಗ್ರಾಂ ತೂಕ ಹೊಂದಿವೆ. ಆದರೆ 30 ವಾರಗಳ ಹೆರಿಗೆಯಾಗಿದ್ದು, ಪ್ರಸವ ಪೂರ್ವ ಜನನವಾದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7,00,000 ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ. ಎಂದು ಮಹಿಳೆಗೆ ಪ್ರಸವಪೂರ್ವ ಆರೈಕೆ ಮಾಡಿದ ಸ್ತ್ರೀರೋಗತಜ್ಞೆ ಡಾ.ಜೋಯ್ಲೀನ್ ಡಿ.ಅಲ್ಮೇಡಾ ಹೇಳಿದ್ದಾರೆ. ಹೆರಿಗೆ ಸಂದರ್ಭ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ಕಾರ್ಯನಿರ್ವಹಿಸಿ ತಾಯಿ-ಮಕ್ಕಳಿಗೆ ಆರೈಕೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆಯಾಗಿದೆ.

Edited By : Shivu K
PublicNext

PublicNext

06/01/2025 02:59 pm

Cinque Terre

36.12 K

Cinque Terre

1

ಸಂಬಂಧಿತ ಸುದ್ದಿ