ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗಾಂಜಾ ಸೇವನೆ - ವ್ಯಕ್ತಿ ಪೊಲೀಸ್ ವಶಕ್ಕೆ

ಉಡುಪಿ: ನಗರದ ಇಂದ್ರಾಳಿ ಜಂಕ್ಷನ್‌ನಲ್ಲಿ ಮಾದಕ ವಸ್ತು ಗಾಂಜಾ ಸೇವಿಸಿದ್ದ ವ್ಯಕ್ತಿಯನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಯಶ್‌ರಾಜ್‌ ಬಂಧಿತ ಆರೋಪಿ.

ಗಸ್ತಿನಲ್ಲಿದ್ದ ಪೊಲೀಸರಿಗೆ ಯುವಕ ಅಮಲಿನಲ್ಲಿರುವುದು ಕಂಡು ಬಂದಿರುವ ಕಾರಣ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಬಳಿಕ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

06/01/2025 03:54 pm

Cinque Terre

4.84 K

Cinque Terre

0