ಬಂಗಾರಪೇಟೆ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರು ಜಯ ಗಳಿಸಿದ್ದಾರೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಪಿಎಲ್ ಡಿ ಬ್ಯಾಂಕಿನ 16 ಸ್ಥಾನಗಳ ಪೈಕಿ 11 ಕಾಂಗ್ರೆಸ್ ಬೆಂಬಲಿಗರು ಅವಿರೋಧವಾಗಿ ಆಯ್ಕೆಯಾದರು. ಉಳಿದ 5 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಸೂಲಿಕುಂಟೆ ರಘುನಾಥ್, ಬೂದಿಕೋಟೆ ಪುಷ್ಪ, ಬಂಗಾರಪೇಟೆ ಹೆಚ್ ಕೆ ನಾರಾಯಣಸ್ವಾಮಿ, ಚಿಕ್ಕಿಅಕಡಂಹಳ್ಳಿ ಎಸ್ ನಾರಾಯಾಣಗೌಡ ವಿಜಯಮಾಲೆ ಧರಿಸಿದರು. ಕಾಂಗ್ರೆಸ್ ವಿಜಯೋತ್ಸವದ ವೇಳೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ, ಪುರಸಭೆ ಅಧ್ಯಕ್ಷ ಗೋವಿಂದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ್ ಮತ್ತಿತರರು ಇದ್ದರು.
Kshetra Samachara
06/01/2025 04:01 pm