ಶ್ರೀನಿವಾಸಪುರ: ಕೆ.ಸಿ.ವ್ಯಾಲಿ 3ನೇ ಹಂತದ ಶುದ್ದೀಕರಣ ಮಾಡಿ ಪಿ-ನಂಬರ್ ದುರಸ್ತಿ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡುವ ಜೊತೆಗೆ ಡಿ.ಸಿ.ಸಿ. ಬ್ಯಾಂಕ್ ಚುನಾವಣೆ ನಡೆಸುವ ಜೊತೆಗೆ ಅವರೇಕಾಯಿ ವಹಿವಾಟಿಗೆ ಸೂಕ್ತ ಜಾಗವನ್ನು ಗುರುತಿಸಿ ಬೆಳೆ ನಷ್ಟ ಪರಿಹಾರ 100 ಕೋಟಿ ಪರಿಹಾರವನ್ನು ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ಹೋರಾಟ ಮಾಡಿ ಕಂದಾಯ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು. ಇದೇ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜಿಲ್ಲೆಗೆ ಹರಿಯುತ್ತಿರುವ ಕೆ.ಸಿ.ವ್ಯಾಲಿ ನೀರಿನಿಂದ ಅಂತರ್ಜಲ ಅಭಿವೃದ್ದಿಯಾಗಿದೆ ಆದರೆ ಹರಿಯುತ್ತಿರುವ ನೀರಿನ ಪಕ್ಕದಲ್ಲಿರುವ ರೈತರ ಬೆಳೆಗಳ ಮೇಲೆ ಹಸಿರು ಸೊಳ್ಳೆ ಹಾವಳಿಯಿಂದ ಸಂಪೂರ್ಣವಾಗಿ ಬೆಳೆ ನಷ್ಟವಾಗುವ ಜೊತೆಗೆ 5 ವರ್ಷಗಳಿಂದ ಟೆಮೋಟೋ ಮತ್ತಿತರ ಬೆಳೆಗಳು ಸಂಪೂರ್ಣವಾಗಿ ರೋಗಗಳಿಗೆ ತುತ್ತಾಗಿ ಲಕ್ಷಾಂತರ ರೂಪಾಯಿ ಬಂಡವಾಳ ನಷ್ಟವಾಗಿ ರೈತರ ಬದುಕು ಬೀದಿಗೆ ಬಿದಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಸಂಬಂಧಪಟ್ಟ ಇಲಾಖೆಗಳು ವಿಫಲವಾಗಿದೆ ಎಂದು ಅವ್ಯವಸ್ಥೆ ವಿರುದ್ದ ಅಸಮದಾನ ವ್ಯಕ್ತಪಡಿಸಿದರು.
Kshetra Samachara
06/01/2025 04:04 pm