ಸಾಗರ : ಹಿರಿಯ ಸಾಹಿತಿ ಡಾ. ನಾ.ಡಿಸೋಜ ಅವರ ಪಾರ್ಥಿವ ಶರೀರ ಸೋಮವಾರ ಮಧ್ಯಾಹ್ನ 2ರ ಸುಮಾರಿಗೆ ನೆಹರೂ ನಗರದಲ್ಲಿರುವ ಅವರ ಸ್ವಗೃಹಕ್ಕೆ ಆಗಮಿಸಿತು.
ಶಾಸಕ ಗೋಪಾಲಕೃಷ್ಣ ಬೇಳೂರು , ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಹಾಗೂ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ರವರು ಅಂತಿಮ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.
ಡಾ. ನಾ.ಡಿಸೋಜ ಅವರ ಅಂತಿಮ ದರ್ಶನ ಪಡೆದು ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಸಾಹಿತಿ ನಾ.ಡಿಸೋಜ ನಿಧನದಿಂದ ರಾಜ್ಯವೂ ಓರ್ವ ಶ್ರೇಷ್ಟಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಸಾಗರದ ಕೀರ್ತಿಯನ್ನು ಜಗದಗಲ ಪ್ರಸರಿಸಿದ ಹೆಗ್ಗಳಿಕೆ ನಾ.ಡಿಸೋಜ ಅವರಿಗೆ ಸಲ್ಲುತ್ತದೆ. ಸಾಹಿತ್ಯ ಅಕಾಡೆಮಿ ಸೇರಿದಂತೆ ರಾಜ್ಯೋತ್ಸವ ಪ್ರಶಸ್ತಿ ಸೇರಿ ಅನೇಕ ಪ್ರಶಶ್ತಿಗಳು ಅವರ ಸಾಹಿತ್ಯ ಸಾಧನೆಗೆ ಸಂದಿದೆ. ಮಡಿಕೇರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಗರದ ಕೀರ್ತಿಯನ್ನು ಹೆಚ್ಚಿಸಿದ್ದರು. ಮಂಗಳವಾರ ಅವರ ಅಂತಿಮ ದರ್ಶನಕ್ಕೆ ಅಗತ್ಯ ಸಿದ್ದತೆಯನ್ನು ನಡೆಸಲಾಗಿದೆ. ಮಕ್ಕಳ ಮೇಲೆ ನಾಡಿಯವರಿಗೆ ವಿಶೇಷ ಪ್ರೀತಿ ಇರುವುದರಿಂದ ಮಂಗಳವಾರ ನಗರವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ ಮಾಡಲು ಸಾಧ್ಯವೆ ಎನ್ನುವುದನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ವರದಿ: ಜಮೀಲ್ ಸಾಗರ್ (ಪಬ್ಲಿಕ್ ನೆಕ್ಸ್ಟ್ ಸಾಗರ )
Kshetra Samachara
06/01/2025 04:11 pm