ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING: ನಕ್ಸಲರಿಂದ ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಪೋಟ - 9 ಮಂದಿ ಯೋಧರು ಹುತಾತ್ಮ.!

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರ ಗುಂಪು ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟಿಸಿದೆ.

ಘಟನೆಯಲ್ಲಿ ಈವರೆಗೆ ಕನಿಷ್ಠ 9 ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು. ಬಿಜಾಪುರ ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ಎಂಟು ಜವಾನರು ಮತ್ತು ಚಾಲಕ ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಕನಿಷ್ಠ 20 ಸೈನಿಕರನ್ನು ವಾಹನವು ಹೊತ್ತೊಯ್ಯುತ್ತಿತ್ತು.

Edited By : Abhishek Kamoji
PublicNext

PublicNext

06/01/2025 04:16 pm

Cinque Terre

35.51 K

Cinque Terre

3

ಸಂಬಂಧಿತ ಸುದ್ದಿ