ವಿಜಯಪುರ: ಡಾ. ಬಿ ಆರ್ ಅಂಬೇಡ್ಕರ್ ವಿಚಾರವಾಗಿ ಸಂಸತ್ತಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತಪರ ಸಂಘಟನೆ ಕಾರ್ಯಕರ್ತರು ಅರೆಬೆತ್ತಲೆ ಮೆರವಣಿಗೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಇದೇ ಸಂದರ್ಭದಲ್ಲಿ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಸಚಿವ ಸಂಪುಟದಿಂದ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
PublicNext
06/01/2025 04:26 pm