ಕೋಟ: ಸಾಲಿಗ್ರಾಮ ಪಾರಂಪಳ್ಳಿ ಪಡುಕರೆ ಬೀಚ್‌ನಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಚೀಚ್ ಸ್ಚಚ್ಛತಾ ಕಾರ್ಯಕ್ರಮ ನಡೆಯಿತು. ಹಂದಟ್ಟು ಮಹಿಳಾ ಬಳಗ ಕೋಟ,ಮಣೂರು ಫ್ರೆಂಡ್ಸ್ , ಸಾಲಿಗ್ರಾಮ ಪಟ್ಟಣಪಂಚಾಯತ್, ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಇವರುಗಳ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.
ಅಂದಹಾಗೆ ಇದು ಈ ಅಭಿಯಾನದ 237ನೇ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನವಾಗಿದೆ.ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಪಾರಂಪಳ್ಳಿ ರಾಜೇಶ ಉಪಾಧ್ಯಾ, ಸ್ವಚ್ಛತೆ ಪ್ರತಿಯೊಬ್ಬರ ಧ್ಯೇಯವಾಗಬೇಕು. ಇಲ್ಲವಾದಲ್ಲಿ ಮುಂದಿನ ಪೀಳಿಗೆಗೆ ಸಂಚಕಾರ ತಪ್ಪಿದಲ್ಲ.ಪಕೃತಿ ಉಳಿಸುವ ಕಾರ್ಯ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಶ್ರೇಯಸ್ಸು. ಆದರೆ ಪ್ರಸ್ತುತ ಜನಸಾಮಾನ್ಯರು ಇದರ ಬಗ್ಗೆ ನಿರ್ಲಕ್ಷ್ಯ ಧೋರಣೆ ತುಂಬಾ ನೋವುಂಟು ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಮಾಜಿ ಅಧ್ಯಕ್ಷ ಗಿರೀಶ್ ಪೂಜಾರಿ, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಣೂರು ಫ್ರೆಂಡ್ಸ್‌ನ ದಿನೇಶ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಮತ್ತಿತರರು ಉಪಸ್ಥಿತರಿದ್ದರು.
PublicNext
06/01/2025 04:35 pm