ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯಲ್ಲಿ ವಿಕಲಚೇತನರ ಸಾಧನ ಸಲಕರಣೆಗಳ ಉತ್ಪಾದನೆ ಮತ್ತು ದುರಸ್ತಿ ಕೇಂದ್ರ ಸ್ಥಾಪಿಸಲು ಕೇಂದ್ರಕ್ಕೆ ಪ್ರಸ್ತಾವ : ಸಂಸದ ಕೋಟ

ಉಡುಪಿ : ಜಿಲ್ಲಾಡಳಿತ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಇಂದು ಉಚಿತ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, 426 ವಿಕಲಚೇತನರಿಗೆ ಹಾಗೂ 273 ಹಿರಿಯ ನಾಗರಿಕರಿಗೆ ಒಟ್ಟು 64.68 ಲಕ್ಷ ರೂ. ಮೌಲ್ಯದ ಸಾಧನ ಸಲಕರಣೆಗಳನ್ನು ಇಂದು ವಿತರಿಸಲಾಯಿತು.

ಇದೊಂದು ಉತ್ತಮ ಕಾರ್ಯಕ್ರಮ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ನೀಡಲಾಗುವ ಅಗತ್ಯ ಸಲಕರಣೆಗಳ ಉತ್ಪಾದನ ಕೇಂದ್ರ ಹಾಗೂ ದುರಸ್ತಿ ಕೇಂದ್ರವನ್ನು ಉಡುಪಿ ಜಿಲ್ಲೆಯಲ್ಲಿ ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಈ ವರ್ಷ ಉಡುಪಿ ಜಿಲ್ಲೆಯಲ್ಲಿ ಸರ್ವೆ ನಡೆಸಿ 426 ವಿಕಲಚೇತನರಿಗೆ 41.68 ಲಕ್ಷ ರೂ. ಮೌಲ್ಯದ ಹಾಗೂ 273 ಹಿರಿಯ ನಾಗರಿಕರಿಗೆ 23 ಲಕ್ಷ ರೂ. ಮೌಲ್ಯದ ಸಲಕರಣೆಗಳನ್ನು ಇಂದು ವಿತರಿಸಲಾಗುತ್ತಿದೆ. ಈ ಸಲಕರಣೆಗಳನ್ನು ದುರಸ್ತಿ ಪಡಿಸಲು ಮಂಗಳೂರಿನಲ್ಲಿ ದುರಸ್ತಿ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯಲ್ಲೂ ದುರಸ್ತಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು. ಈ ನಿಟ್ಟಿನಲ್ಲಿ ಸಂಸದರು ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

Edited By : Vinayak Patil
PublicNext

PublicNext

06/01/2025 04:41 pm

Cinque Terre

18.42 K

Cinque Terre

0