ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ: ಶಿಕ್ಷಣದ ಜೊತೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕೊಡಬೇಕು - ಬಸವರಾಜ ಹೊರಟ್ಟಿ

ಯಲ್ಲಾಪುರ: ಶಿಕ್ಷಣದ ಜೊತೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕೊಡಬೇಕು. ಕಲಿಕಾ ಅವಕಾಶದಿಂದ ವಂಚಿತರಾಗುವ ಪ್ರತಿಭಾವಂತ ಮಕ್ಕಳಿಗೆ ಶಿಕ್ಷಣ ಮತ್ತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ನೆರವಾಗಬೇಕು. ಬಡಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಾರ್ಗದರ್ಶನ ಮಾಡುವ ಕೆಲಸ ಎಲ್ಲರಿಂದ ಆಗಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಯಲ್ಲಾಪುರ ಪಟ್ಟಣದ ಕಾರ್ಮಿಕ ಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು, ಸಮಾವೇಶವನ್ನು ಉದ್ಘಾಟಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಯಕ್ತಿಕ ಶಿಸ್ತು, ದೇಶಪ್ರೇಮ, ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವಂತೆ ಪ್ರೇರೇಪಿಸುವ ಕೆಲಸ ಶಿಕ್ಷಕರಿಂದ ಆಗಬೇಕು. ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ ಕೌಶಲ್ಯಪೂರ್ಣ ಕಲಿಕೆಗೆ ಯುವ ಶಕ್ತಿಯನ್ನು ಸಿದ್ಧಗೊಳಿಸಬೇಕು ಎಂದರು. ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶಶಿಭೂಷಣ ಹೆಗಡೆ, ಉಪವಿಭಾಗಾಧಿಕಾರಿ ಕಾವ್ಯಾರಾಣಿ, ಉಪನಿರ್ದೇಶಕ ಪಾರಿ ಬಸವರಾಜ ಮುಂತಾದವರು ಮಾತನಾಡಿದರು. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ರಾಷ್ಟç ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಸಮಾವೇಶದಲ್ಲಿ ಪುರಸ್ಕರಿಸಲಾಯಿತು.

Edited By : PublicNext Desk
Kshetra Samachara

Kshetra Samachara

06/01/2025 05:01 pm

Cinque Terre

3.58 K

Cinque Terre

0

ಸಂಬಂಧಿತ ಸುದ್ದಿ