ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ ಜಿಲ್ಲೆಯಲ್ಲಿ 14.29 ಲಕ್ಷ ಮತದಾರರು ಪಟ್ಟಿ ಪ್ರಕಟ

ಚಿತ್ರದುರ್ಗ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ 14,29,555 ಮತದಾರರು ಇದ್ದು, ಪುರುಷ-7,09,048, ಮಹಿಳೆ-7,20,420 ಹಾಗೂ ಇತರೆ-87 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

ಸೋಮವಾರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಅನ್ವಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಯನ್ನು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಪ್ರಚುರಪಡಿಸಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನುಸಾರ ಪ್ರತಿ ವರ್ಷ ಅಕ್ಟೋಬರ್ ಮಾಹೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಒಟ್ಟು 1,661 ಮತಗಟ್ಟೆಗಳಿದ್ದು, ಕರಡು ಮತದಾರರ ಪಟ್ಟಿ ಪ್ರಕಟಣೆಯನ್ವಯ ಈ ಮೊದಲು ಜಿಲ್ಲೆಯಲ್ಲಿ 14,35,994 ಮತದಾರರಿದ್ದರು. ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರ ಜಿಲ್ಲೆಯಲ್ಲಿ 14,29,555 ಮತದಾರರಿದ್ದಾರೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2025ರ ಕಾರ್ಯಕ್ರಮದ ಅನ್ವಯ ಪ್ರಸಕ್ತ ಸಾಲಿನ ವರ್ಷದಲ್ಲಿ 13,758 ಮತದಾರರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಾಗ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮರಣ, ಡಬಲ್ ಎಂಟ್ರಿ ಸೇರಿದಂತೆ ಒಟ್ಟು 20,197 ಮತದಾರರನ್ನು ನಿಯಮಾನುಸಾರವಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಒಟ್ಟು 11,727 ಮತದಾರರ ಹೆಸರು, ಭಾವಚಿತ್ರ ಬದಲಾವಣೆ, ತಂದೆ, ಗಂಡನ ಹೆಸರು ಹಾಗೂ ವಿಳಾಸ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

06/01/2025 05:11 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ