ಹಾಸನ: ಸಚಿವರಾದ ಪ್ರಿಯಾಂಕ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಸುಳ್ಳು ಅಪಾದನೆ ಮಾಡುತ್ತಿರುವುದನ್ನು ಖಂಡಿಸಿ ಮೆರವಣಿಗೆ ಮೂಲಕ ಬಂದು ನಗರದ ಅಂಬೇಡ್ಕರ್ ಪ್ರತಿಮೆ ಮುಂದೆ ಕಾಂಗ್ರೆಸ್ ಅಖಿಲ ಕರ್ನಾಟಕ ಡಾ. ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಬಳಗದಿಂದ ಮುಖ್ಯ ರಸ್ತೆ ಮಧ್ಯೆ ಬಿಜೆಪಿ ನಾಯಕರ ಭಾವಚಿತ್ರ ಸುಟ್ಟು ಹಾಕಿ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬಿ.ಎಂ. ರಸ್ತೆ ಮೂಲಕ ಜಿಲ್ಲಾ ಪಂಚಾಯತ್ ಮುಂದೆ ವೃತ್ತದ ಬಳಿ ಇರುವ ಅಂಭೇಡ್ಕರ್ ಪ್ರತಿಮೆ ಮುಂದೆ ಕೆಲ ಸಮಯ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ನಂತರ ಕೈಲಿ ಇಡಿದಿದ್ದ ಬಿಜೆಪಿ ನಾಯಕರ ಭಾವಚಿತ್ರವನ್ನು ಒಂದೆಡೆ ಎಸೆದು ಅದಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸುಡಲಾಯಿತು ಈ ವೇಳೆ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಷಡ್ಯಂತ್ರ ಮಾಡಿದ್ದಾರೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
Kshetra Samachara
06/01/2025 05:15 pm