ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ವಿರುದ್ದ ಸುಳ್ಳು ಸುದ್ದಿ- ದೂರು ದಾಖಲು

ಉಡುಪಿ: ನೈಜ ವಿಷಯ ಮರೆಮಾಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಅವರು ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ.

2024ರ ಡಿಸೆಂಬರ್ 24ರಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಉಡುಪಿಯ ಶಾಸಕರು ಮಸೀದಿ, ದೇವಸ್ಥಾನ ಹಾಗು ಚರ್ಚುಗಳ ವಿಷಯದ ಬಗ್ಗೆ ಚರ್ಚೆಗೆ ತೆಗೆದುಕೊಂಡಾಗ ನಾನು ಯಾವುದೇ ಧರ್ಮಕ್ಕೆ ಅಥವಾ ಯಾವುದೇ ಸಮುದಾಯದ ವಿರುದ್ಧ ಅಪಮಾನ ಮಾಡುವ ರೀತಿ ಮಾತನಾಡಿರುವುದಿಲ್ಲ. ಧಾರ್ಮಿಕ ಸಂಸ್ಥೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಮುಂದುವರಿಯಬೇಕು ಎಂದು ಹೇಳಿರುವುದಾಗಿ ತಿಳಿಸಿದ್ದು, ಆದರೆ ಒಬ್ಬ ವ್ಯಕ್ತಿ ನಾನು ಹಿಂದೂ ಧರ್ಮಕ್ಕೆ ಅವಹೇಳನ ಮಾಡಿರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುತ್ತಾನೆ ಎಂದು ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕರಾದ ರಮೇಶ್ ಕಾಂಚ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಾನು ಹಿಂದೂ ಧರ್ಮದ ವಿರೋಧಿ ಎಂದು ಬಿಂಬಿಸಿ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಮಾಡಿರುತ್ತಾನೆ. ಹಾಗೆಯೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಆ ಮೂಲಕ ಪ್ರಯತ್ನಿಸಿರುತ್ತಾನೆ. ಆದ್ದರಿಂದ ಈ ಸುಳ್ಳು ಸುದ್ದಿ ಹಬ್ಬಿಸುವ ಆ ವ್ಯಕ್ತಿಗೆ ಎಚ್ಚರಿಕೆ ನೀಡಿ ಸರಿಯಾದ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

06/01/2025 05:18 pm

Cinque Terre

4.76 K

Cinque Terre

0