ಹಾಸನ: ಚಲಿಸುತ್ತಿದ್ದ ಸಾರಿಗೆ ಬಸ್ ಚಕ್ರ ಕಿತ್ತು ಬಿದ್ದ ಹಿನ್ನೆಲೆ ಬಸ್, ಕಾರು ಮತ್ತು ಬೈಕ್‌ಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಹಾಸನ ತಾಲ್ಲೂಕಿನ ಬೇಲೂರು ರಸ್ತೆಯ ಕುಪ್ಪಳ್ಳಿ ಬಳಿ ನಡೆದಿದೆ.
ಚಿಕ್ಕಮಗಳೂರಿಗೆ ತೆರಳುತ್ತಿದ್ದ KA-01-F-0406 ನಂಬರ್‌ನ ಸಾರಿಗೆ ಬಸ್‌ನ ಚಕ್ರ ಕಿತ್ತೊಗುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ನಿಲ್ಲಿಸಿದ್ದ ಕಾರು, ಬೈಕ್‌ಗೆ ಡಿಕ್ಕಿಯಾಗಿದೆ. ಒಂದು ಕಾರು, ಒಂದು ಬೈಕ್ ಜಖಂಗೊಂಡಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
PublicNext
06/01/2025 05:30 pm