ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಮಾದಕ ವ್ಯಸನತೆಯಿಂದ ಸಮಾಜ ಕತ್ತಲಾಗುತ್ತಿದೆ - ಕುಲ ಸಚಿವ ಡಾ. ಹೆಚ್. ವಿಶ್ವನಾಥ್

ಚಿತ್ರದುರ್ಗ: ಮಾದಕ ವ್ಯಸನತೆಯಿಂದ ಸಮಾಜ ಕತ್ತಲಾಗುತ್ತಿದೆ, ಯುವ ಸುಮುದಾಯ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತರಾಗಿ ಉತ್ತಮ ಸಮಾಜ ನಿರ್ಮಾಣ ಮಾಡುವುದರ ಮೂಲಕ ದೇಶವನ್ನು ರಕ್ಷಿಸಬೇಕಾಗಿದೆ ಎಂದು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ‌ ಡಾ.ಹೆಚ್ ವಿಶ್ವನಾಥ್ ತಿಳಿಸಿದರು.

ತಾಲೂಕಿನ ಗುಡ್ಡದ ರಂಗನಹಳ್ಳಿ ಸಮೀಪದ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನೆಹರು ಯುವ ಕೇಂದ್ರ, ದಾವಣಗೆರೆ ವಿಶ್ವವಿದ್ಯಾನಿಲಯ ಸಂಶೋಧನ ಅಧ್ಯಯನ ಕೇಂದ್ರ ಹಾಗೂ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ಮಾದಕ ವ್ಯಸನ, ಮಾದಕ ವಸ್ತುಗಳು ದುಷ್ಪರಿಣಾಮ ಹಾಗೂ ಸೈಬರ್ ಅಪರಾಧಗಳ ಕುರಿತು ಜಾಗೃತಿ ಮತ್ತು ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು

ದೇಶದಲ್ಲಿ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆಯುತ್ತಿರುವ ಸೈಬರ್ ಕ್ರೈಂ ಗಳು ಅದರ ಜೊತೆಗೆ ಮಾದಕ ವ್ಯಸನಗಳು ಕೂಡ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಇದರಿಂದಾಗಿ ಸಾಕಷ್ಟು ಯುವ ಸಮುದಾಯ ಮಾದಕ ವ್ಯಸನಿಗಳಾಗಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಸದೃಢ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.

ತಂದೆ ತಾಯಿಗಳು ಮಕ್ಕಳ ಚೆನ್ನಾಗಿ ಓದಬೇಕೆಂದು ಉನ್ನತ ಕಾಲೇಜುಗಳಿಗೆ ಸೇರಿಸಿದರೆ ಮಕ್ಕಳು ಮಾತ್ರ ಮಾದಕ ವ್ಯಸನಿಗಳಾಗಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎನ್ನುವುದು ನೋವಿನ ಸಂಗತಿಯಾಗಿದೆ. ಮಾದಕ ವ್ಯಸನಗಳು ಹೆಮ್ಮರವಾಗಿ ದೇಶದಲ್ಲಿ ಹರಡುತ್ತಿದೆ ಸರ್ಕಾರಗಳನ್ನು ಇವುಗಳನ್ನು ನಿಯಂತ್ರಿಸುವಲ್ಲಿ ಸಾಕಷ್ಟು ನಿಯಂತ್ರಣ ಕ್ರಮಗಳನ್ನು ತಂದರು ಸಹ ಯುವ ಸಮುದಾಯ ದಾರಿ ತಪ್ಪುತ್ತಿದೆ ಎಂದರು.

ಯುವ ಸಮುದಾಯ ವ್ಯಸನ ಮುಕ್ತ ರಾಷ್ಟ್ರ ನಿರ್ಮಾಣ ಮಾಡಬೇಕೆನ್ನುವ ಪರಿಕಲ್ಪನೆಯನ್ನು ಕೈಗೆತ್ತಿಕೊಳ್ಳಬೇಕಿದೆ ಹಾಗಾಗಿ ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಲೇಖನಗಳ ಮೂಲಕ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಬೇಕಿದೆ ಪ್ರತಿದಿನವೂ ಸೈಬರ್ ಪ್ರಕರಣಗಳು ಹೆಚ್ಚುತ್ತಲೇ ಇವೆ ಸೈಬರ್ ಪ್ರಕರಣಗಳನ್ನು ನಿಯಂತ್ರಿಸಬೇಕಾದರೆ ಮೊದಲು ನಮ್ಮ ಬ್ಯಾಂಕ್ ಖಾತೆಯ ಎಟಿಎಂ ಪಿನ್‌‌ ನಂಬರ್ ಹಾಗೂ ಮೊಬೈಲ್ ಓಟಿಪಿಗಳನ್ನ ಬೇರೆಯವರ ಜೊತೆಗೆ ಹಂಚಿಕೊಳ್ಳಬಾರದು ಎಂದರು.

Edited By : PublicNext Desk
Kshetra Samachara

Kshetra Samachara

06/01/2025 05:30 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ