ಕಾರವಾರ: ತಾಲೂಕಿನ ಬಿಣಗಾದ ರಾಷ್ಟ್ರೀಯ ಹೆದ್ದಾರಿ 66 ರ ಮಾಳಸಾ ರಸ್ತೆಯಲ್ಲಿ ಅರ್ಧಕ್ಕೆ ನಿಂತಿರುವ ಸರ್ವಿಸ್ ರಸ್ತೆಯ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಒತ್ತಾಯಿಸಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.
ಕಳೆದ ಎರಡರಿಂದ ಮೂರು ವರ್ಷದ ವರೆಗೆ ಸರ್ವಿಸ್ ರಸ್ತೆಯನ್ನು ನಿರ್ಮಿಸಿ ಅರ್ಧದಲ್ಲಿ ಕಾಮಗಾರಿಯನ್ನು ನಿಲ್ಲಿಸಲಾಗಿದೆ. ಇದರಿಂದ ಈಗಾಗಲೇ ಬಹಳಷ್ಟು ಅಪಘಾತಗಳು ಸಂಭವಿಸಿದ್ದು ಕೆಲವರು ಮೃತಪಟ್ಟಿದ್ದಾರೆ. ಈ ಬಗ್ಗೆ ಐಆರ್ಬಿ ಕಂಪೆನಿಯ ಅಧಿಕಾರಿಗಳಿಗೆ ಸಂಪರ್ಕಿಸಿದಾಗಲೂ ಭೂ ಸ್ವಾಧೀನ ಪ್ರಕ್ರಿಯೆಯು ಬಾಕಿ ಇರುವ ಕಾರಣ ಸರ್ವಿಸ್ ರಸ್ತೆಯ ಕಾಮಗಾರಿಯನ್ನು ನಿಲ್ಲಿಸಲಾಗಿದೆ ಎಂದು ತಿಳಿಸಿರಿವ ಬಗ್ಗೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಹಿಂದೆಯೂ ಜಿಲ್ಲಾಧಿಕಾರಿ ಮನವಿಯನ್ನು ಸಲ್ಲಿಸಿದಾಗ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸುವಿದಾಗಿ ತಿಳಿಸಿದ್ದರು. ಆದರೆ ವರ್ಷಗಳೇ ಕಳೆದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಸರ್ವಿಸ್ ರಸ್ತೆಯ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
Kshetra Samachara
06/01/2025 05:56 pm