ವಿಜಯಪುರ: ಉತ್ತರ ಕರ್ನಾಟಕದ ಪ್ರಸಿದ್ಧ ಜಾತ್ರೆ ಹಾಗೂ ನಮ್ಮೂರ ಜಾತ್ರೆ ಎಂದೇ ಖ್ಯಾತಿ ಹೊಂದಿರುವ ವಿಜಯಪುರ ನಗರದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಈ ಬಾರಿಯೂ ಜನವರಿ 11 ರಿಂದ 17 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ವಿಜಯಪುರ ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ಸಂಕ್ರಮಣದ ಜಾತ್ರಾ ಮಹೋತ್ಸವ ಅಂಗವಾಗಿ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿ ಸಿದ್ದೇಶ್ವರ ಜಾತ್ರೆಗೆ ಜನವರಿ 11 ರಿಂದ ಚಾಲನೆ ನೀಡಲಾಗುವುದು. ಈ ಬಾರಿ ಮದ್ದು ಸುಡುವ ಕಾರ್ಯಕ್ರಮ ಕೇವಲ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು. ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಪಟುಗಳಿಂದ ಕುಸ್ತಿ ಸ್ಪರ್ಧೆ ನಡೆಯಲಿದ್ದು, ವಿವಿಧ ಕ್ರೀಡೆಗಳ ಸ್ಪರ್ಧೆ ಏರ್ಪಾಟು ಮಾಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಜಾತ್ರೆಯಲ್ಲಿ ಅನ್ಯಕೋಮಿನ ವ್ಯಾಪಾರಸ್ಥರು ವ್ಯಾಪಾರ ಮಾಡಿದ್ರೆ ಅವರಿಗೆ ಹರಾಮ್ ಎನಿಸದೇ ಇದ್ದರೆ ವ್ಯಾಪಾರ ಮಾಡಬಹುದು. ನಮ್ಮ ಹಿಂದೂ ಧರ್ಮದ ಮೇಲೆ ಸಿದ್ದೇಶ್ವರ ಜಾತ್ರೆಯ ಮೇಲೆ ಗೌರವವಿರುವವರು ಬರಬಹುದು ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಆಡಳಿತ ಮಂಡಳಿಯ ಹಾಗೂ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ಗಣ್ಯರು, ಅಭಿಮಾನಿಗಳು ಉಪಸ್ಥಿತರಿದ್ದರು...
PublicNext
06/01/2025 06:31 pm