ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದರ್ಶನ್ ಸೇರಿ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಇತರೆ ಆರೋಪಿಗಳಿಗೆ ಜಾಮೀನು ನೀಡಿರುವುದನ್ನ ಪ್ರಶ್ನಿಸಿ ನಗರ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಕೊಲೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ವಕೀಲ ಅನಿಲ್ ನಿಶಾನಿ ಎಂಬುವರು ಅರ್ಜಿ ಸಲ್ಲಿಸಿದ್ದು, ವಿಚಾರಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.

ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಡಿ.13ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದರು.

ಗೃಹ ಇಲಾಖೆಯಿಂದ ಪೂರ್ವಾನುಮತಿ ದೊರೆತ ಬಳಿಕ ದಾಖಲೆ ಹಾಗೂ ಚಾರ್ಟ್ ಶೀಟ್ ನಲ್ಲಿನ ಅಂಶವನ್ನ ತರ್ಜುಮೆ ಕಾರ್ಯ ವಿಳಂಬ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸುವ ಕಾರ್ಯ ತಡವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಜೂನ್ 8ರಂದು ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನ ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪದಡಿ ಜೂ.8ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಂತ-ಹಂತವಾಗಿ 17 ಮಂದಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದರು. ಎಲ್ಲಾ ಆರೋಪಿಗಳಿಗೂ ಜಾಮೀನು ದೊರೆತಿದೆ. ಕೆಳ ಹಂತದ ನ್ಯಾಯಾಲಯ ನೀಡಿರುವ ಜಾಮೀನು ಅರ್ಜಿಯನ್ನ ಸುಪ್ರಿಂ ರದ್ದುಗೊಳಿಸಿದರೆ ದರ್ಶನ್ ಸೇರಿ ಇತರ ಆರೋಪಿಗಳನ್ನು ಬಂಧಿಸಬಹುದಾಗಿದೆ.

Edited By : Abhishek Kamoji
PublicNext

PublicNext

06/01/2025 07:06 pm

Cinque Terre

12.94 K

Cinque Terre

0

ಸಂಬಂಧಿತ ಸುದ್ದಿ