ಕೋಲಾರ : ಬಡವರ ಅಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ನಾನಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅಧಿಕಾರಿಗಳು ಯೋಜನೆಗಳ ಸ್ಪಷ್ಠತೆ ಅರಿತು ಕಾರ್ಯೋನ್ಮುಖರಾಗಿ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸಲು ಮುಂದಾಗಬೇಕು ಎಂದು ಕೋಲಾರ ಲೋಕಸಭಾ ಸದಸ್ಯರು ಹಾಗೂ ದಿಶಾ ಸಮಿತಿ ಅಧ್ಯಕ್ಷರು ಆದ ಎಂ.ಮಲ್ಲೇಶ್ ಬಾಬು ತಿಳಿಸಿದರು. ಇಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ ಕುರಿತಾಗಿ ಪರಿಶೀಲನೆ ನಡೆಸಿದ ಅವರು ಕೇಂದ್ರ ಸರ್ಕಾರ ನೀಡಿರುವ ಅನುದಾನದ ಮಾಹಿತಿ ಜನಸಾಮಾನ್ಯರಿಗೆ ತಿಳಿಯಪಡಿಸಬೇಕು. ಅಂತಹ ಯೋಜನೆಗಳ ಸಂಪೂರ್ಣ ಲಾಭವನ್ನು ಜಿಲ್ಲೆಯ ಜನತೆ ಪಡೆಯಬೇಕು. ಜನರಿಗೆ ಇಲಾಖಾವಾರು ಯೋಜನೆಗಳನ್ನು ಜಾರಿಗೊಳಿಸಲು ಸ್ಥಳೀಯ ಶಾಸಕರು, ಸಂಸದರ ಸಮ್ಮುಖದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದರು.
Kshetra Samachara
06/01/2025 07:56 pm